ವಿಮೋಚನಕಾಂಡ 32:8 - ಕನ್ನಡ ಸಮಕಾಲಿಕ ಅನುವಾದ8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು. ಅಧ್ಯಾಯವನ್ನು ನೋಡಿ |