Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:11 - ಕನ್ನಡ ಸಮಕಾಲಿಕ ಅನುವಾದ

11 ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:11
19 ತಿಳಿವುಗಳ ಹೋಲಿಕೆ  

ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”


ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.


ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು.


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ಮುಖಾಮುಖಿಯಾಗಿ ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದರು.


ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ನಾನೇ ಯೆಹೋವ ದೇವರು, ಅದೇ ನನ್ನ ಹೆಸರು. ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತುತಿಯನ್ನು ಎರಕದ ವಿಗ್ರಹಗಳಿಗೂ ಕೊಡೆನು.


ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.


ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?


ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು.


ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗು. ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು,” ಎಂದನು.


ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.


ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು.


ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು