Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:12 - ಕನ್ನಡ ಸಮಕಾಲಿಕ ಅನುವಾದ

12 ಮೋಶೆಯು ಯೆಹೋವ ದೇವರಿಗೆ, “ ‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೋಶೆಯು ಯೆಹೋವನಿಗೆ, “ಈ ಜನರನ್ನು ಮುನ್ನಡೆಸಬೇಕೆಂದು ನೀನು ನನಗೆ ಹೇಳಿರುವೆ. ಆದರೆ ನನ್ನೊಂದಿಗೆ ಯಾರನ್ನು ಕಳುಹಿಸುತ್ತೀಯೆಂದು ನೀನು ಹೇಳಲಿಲ್ಲ. ನೀನು ನನಗೆ, ‘ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಾನು ನಿನ್ನನ್ನು ಮೆಚ್ಚಿದ್ದೇನೆ’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:12
16 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.


ನಿನ್ನನ್ನು ಹೆಸರು ಹಿಡಿದು ಕರೆಯುವ ಯೆಹೋವ ದೇವರು ನಾನೇ! ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪಗಳನ್ನೂ ನಿನಗೆ ಕೊಡುವೆನು.


ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.


ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು