ವಿಮೋಚನಕಾಂಡ 33:13 - ಕನ್ನಡ ಸಮಕಾಲಿಕ ಅನುವಾದ13 ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |