Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:14
20 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು.


ಯೆಹೋವ ದೇವರು ಇಸ್ರಾಯೇಲರನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅವರಿಗೆ ವಿಶ್ರಾಂತಿಕೊಟ್ಟ ಬಹಳ ದಿವಸಗಳ ತರುವಾಯ ಯೆಹೋಶುವನ ದಿವಸಗಳು ಗತಿಸಿ ವೃದ್ಧನಾದನು.


ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.


ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.


ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ,” ಎಂದು ಹೇಳಿದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


“ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು