Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:16 - ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ಅನುಗ್ರಹ ದೊರಕಿತೆಂಬದು ನೀನೇ ನಮ್ಮ ಸಂಗಡ ಬರುವದರಿಂದಲೇ ಹೊರತು ಬೇರೆ ಯಾತರಿಂದ ತಿಳಿದುಬರುವದು? ಇದರಿಂದ ನಾನೂ ನಿನ್ನ ಪ್ರಜೆಗಳಾದ ಇವರೂ ಭೂವಿುಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷವಾಗಿದ್ದೇವೆಂಬದು ತೋರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:16
15 ತಿಳಿವುಗಳ ಹೋಲಿಕೆ  

ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು?


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು