ವಿಮೋಚನಕಾಂಡ 33:17 - ಕನ್ನಡ ಸಮಕಾಲಿಕ ಅನುವಾದ17 ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು. ಅಧ್ಯಾಯವನ್ನು ನೋಡಿ |