Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:6 - ಕನ್ನಡ ಸಮಕಾಲಿಕ ಅನುವಾದ

6 ಅದರಂತೆಯೇ ಇಸ್ರಾಯೇಲರು ಹೋರೇಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ ಇಸ್ರಯೇಲರು ಹೋರೆಬ್ ಬೆಟ್ಟದಿಂದೀಚೆಗೆ ಒಡವೆವಸ್ತುಗಳನ್ನು ತೊಟ್ಟುಕೊಳ್ಳದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಇಸ್ರಾಯೇಲ್ಯರು ಹೋರೆಬ್ ಬೆಟ್ಟದಿಂದೀಚೆಗೆ ಆಭರಣಗಳನ್ನು ಧರಿಸಿಕೊಳ್ಳದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ಹೋರೆಬ್ ಬೆಟ್ಟದಲ್ಲಿದ್ದಾಗ ಆಭರಣಗಳನ್ನು ಧರಿಸಿಕೊಳ್ಳುವುದನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:6
7 ತಿಳಿವುಗಳ ಹೋಲಿಕೆ  

ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.


ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.


ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.


ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು