ವಿಮೋಚನಕಾಂಡ 34:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಈ ಕಲ್ಲುಗಳ ಮೇಲೆ ಬರೆಯುವೆನು. ಅಧ್ಯಾಯವನ್ನು ನೋಡಿ |