Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:16 - ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಕನ್ನಿಕೆಗಳನ್ನು ತೆಗೆದುಕೊಳ್ಳುವದಕ್ಕೆ ಆಸ್ಪದವುಂಟಾಗುವದು; ತರುವಾಯ ಆ ಸೊಸೆಯರು ತೌರಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:16
23 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು.


ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.


ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು.


“ಆದರೆ, ನೀವು ದೇವರಿಂದ ತಿರುಗಿಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಂಡು ಅವರೊಂದಿಗೆ ಮದುವೆ ಮಾಡಿಕೊಟ್ಟರೆ, ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ,


ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.


ಅವರ ಪುತ್ರಿಯರನ್ನು ತಾವು ಹೆಂಡತಿಯರನ್ನಾಗಿ ತೆಗೆದುಕೊಂಡು, ತಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆ ಮಾಡಿಕೊಟ್ಟು, ಅವರ ದೇವರುಗಳನ್ನು ಸೇವಿಸಿದರು.


ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು.


ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರ, ಅಮ್ಮೋನ್ಯರ, ಎದೋಮ್ಯರ, ಸೀದೋನ್ಯರ, ಹಿತ್ತಿಯರ ಸ್ತ್ರೀಯರನ್ನೂ ಪ್ರೀತಿಮಾಡಿದನು.


ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?


ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.


ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.


ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”


ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.


ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.


ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.


ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.


ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು