Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:18 - ಕನ್ನಡ ಸಮಕಾಲಿಕ ಅನುವಾದ

18 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:18
15 ತಿಳಿವುಗಳ ಹೋಲಿಕೆ  

ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.


ಅಬೀಬ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.


ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.


ಪಸ್ಕವೆಂಬ, ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸಮೀಪವಾಗಿತ್ತು.


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


“ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರಬೇಕು.


ದೇವರು ಈಜಿಪ್ಟ್ ದೇಶದಿಂದ ಅವರನ್ನು ಹೊರಗೆ ತಂದ ಕಾರಣ, ಇದು ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲರು ತಮ್ಮ ಸಂತತಿಗಳಲ್ಲಿ ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯು ಇದೇ.


“ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.


ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


“ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು