Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:2 - ಕನ್ನಡ ಸಮಕಾಲಿಕ ಅನುವಾದ

2 ಬೆಳಿಗ್ಗೆ ನೀನು ಸಿದ್ಧನಾಗಿ ಸೀನಾಯಿ ಬೆಟ್ಟವನ್ನೇರಿ, ಆ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬೆಳಿಗ್ಗೆ ನೀನು ಸಿದ್ಧವಾಗಿದ್ದು, ಸೀನಾಯಿ ಬೆಟ್ಟವನ್ನು ಹತ್ತಿ, ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೆಳಿಗ್ಗೆ ನೀನು ಸಿದ್ಧವಾಗಿದ್ದು ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾಳೆ ಮುಂಜಾನೆ ಸೀನಾಯಿ ಬೆಟ್ಟಕ್ಕೇರಿ ಬಾ. ಬೆಟ್ಟದ ಮೇಲೆ ನನ್ನೆದುರಿನಲ್ಲಿ ನಿಂತುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:2
6 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸೀನಾಯಿ ಬೆಟ್ಟದ ತುದಿಯಲ್ಲಿ ಇಳಿದುಬಂದು ಮೋಶೆಯನ್ನು ಬೆಟ್ಟದ ತುದಿಗೆ ಕರೆದರು. ಮೋಶೆಯು ಮೇಲೆ ಹೋದನು.


ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.


ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.


ಆಗ ಯೆಹೋವ ದೇವರು ಅವನಿಗೆ, “ನೀನು ಇಳಿದು ಹೋಗಿ, ಆರೋನನನ್ನು ಕರೆದುಕೊಂಡು ಇಲ್ಲಿಗೆ ಬಾ. ಆದರೆ ಯೆಹೋವ ದೇವರಿಂದ ಸಂಹಾರವಾಗದಂತೆ ಯಾಜಕರೂ ಜನರೂ ಮುಂದೆ ಯೆಹೋವ ದೇವರ ಬಳಿಗೆ ಬಾರದೇ ಇರಲಿ,” ಎಂದರು.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು