Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:20 - ಕನ್ನಡ ಸಮಕಾಲಿಕ ಅನುವಾದ

20 ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ ಬದಲು ಕೊಟ್ಟು ಬಿಡಿಸಲೇಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:20
11 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ವಿಮೋಚಿಸಿಕೊಳ್ಳಬೇಕು. ಹಾಗೆ ವಿಮೋಚಿಸಿಕೊಳ್ಳದೆ ಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರಲ್ಲಿ ಚೊಚ್ಚಲ ಗಂಡು ಮಕ್ಕಳನ್ನು ಬದಲುಕೊಟ್ಟು, ವಿಮೋಚಿಸಲೇಬೇಕು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.


ಫರೋಹನು ಹಟಮಾರಿತನದಿಂದ ನಮ್ಮನ್ನು ಕಳುಹಿಸದೆ ಇದ್ದಾಗ, ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಎಂದರೆ, ಮನುಷ್ಯರ ಹಾಗೂ ಪಶುಪ್ರಾಣಿಗಳ ಚೊಚ್ಚಲಾದವುಗಳನ್ನು ಕೊಂದುಹಾಕಿದರು. ಆದ್ದರಿಂದ ಚೊಚ್ಚಲ ಗಂಡುಗಳನ್ನೆಲ್ಲಾ ಯೆಹೋವ ದೇವರಿಗೆ ಅರ್ಪಿಸುತ್ತೇವೆ. ನಮ್ಮ ಪುತ್ರರಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇವೆ,’


ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.


ಹೀಗಿರುವುದರಿಂದ ನೀವು ಪ್ರತಿ ವರುಷವು ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಗೊಳ್ಳಬೇಕು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು