ವಿಮೋಚನಕಾಂಡ 34:21 - ಕನ್ನಡ ಸಮಕಾಲಿಕ ಅನುವಾದ21 “ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |
ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.