Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:23 - ಕನ್ನಡ ಸಮಕಾಲಿಕ ಅನುವಾದ

23 ವರುಷಕ್ಕೆ ಮೂರು ಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಸಾರ್ವಭೌಮ ಯೆಹೋವ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲ್ಯರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ನೆರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:23
9 ತಿಳಿವುಗಳ ಹೋಲಿಕೆ  

“ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


“ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.


ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.


“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು