Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:24 - ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ನಿಮ್ಮ ಎದುರಿನಿಂದ ಅನ್ಯಜನರನ್ನು ಹೊರಡಿಸಿ ನಿಮ್ಮ ಎಲ್ಲೆಯನ್ನು ವಿಸ್ತರಿಸುವೆನು. ಅದೂ ಅಲ್ಲದೆ ನೀವು ವರ್ಷಕ್ಕೆ ಮೂರು ಸಾರಿ ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಗೆ ಬರುವಾಗ ಯಾರೂ ನಿಮ್ಮ ನಾಡನ್ನು ಅಪಹರಿಸಲು ಅಪೇಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ನಿಮ್ಮ ಎದುರಿನಿಂದ ಅನ್ಯಜನಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ಅಷ್ಟೇ ಅಲ್ಲದೆ ನೀವು ವರುಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂವಿುಯನ್ನು ಅಪಹರಿಸುವದಕ್ಕೆ ಅಪೇಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:24
19 ತಿಳಿವುಗಳ ಹೋಲಿಕೆ  

ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.


ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.


ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.


ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.


“ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು