ವಿಮೋಚನಕಾಂಡ 34:27 - ಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಮೋಶೆಗೆ ಹೀಗೆ ಹೇಳಿದರು, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಪ್ರಕಾರವೇ ನಾನು ನಿನ್ನ ಮತ್ತು ಇಸ್ರಾಯೇಲಿನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಮೋಶೆಗೆ - ನೀನು ಈ ವಾಕ್ಯಗಳನ್ನು ಬರೆ. ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ನಿಬಂಧನೆಮಾಡಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |