ವಿಮೋಚನಕಾಂಡ 34:28 - ಕನ್ನಡ ಸಮಕಾಲಿಕ ಅನುವಾದ28 ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿ |