Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:35 - ಕನ್ನಡ ಸಮಕಾಲಿಕ ಅನುವಾದ

35 ಆಗ ಮೋಶೆಯ ಮುಖವು ಪ್ರಕಾಶಿಸುವುದನ್ನು ಇಸ್ರಾಯೇಲರು ನೋಡಿದ್ದರು. ಮೋಶೆ ದೇವರ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ಅವನು ತನ್ನ ಮುಖದ ಮೇಲೆ ತಿರುಗಿ ಮುಸುಕನ್ನು ಹಾಕಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮೋಶೆಯ ಮುಖವು ಪ್ರಕಾಶಮಾನವಾಗಿರುವದನ್ನು ಇಸ್ರಾಯೇಲ್ಯರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತಾಡುವದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ತಿರಿಗಿ ಹಾಕಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ತನ್ನ ಮುಖಕ್ಕೆ ಮುಸುಕು ಹಾಕಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:35
9 ತಿಳಿವುಗಳ ಹೋಲಿಕೆ  

ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


ಜ್ಞಾನಿಯ ಹಾಗೆ ಇರುವವರು ಯಾರು? ಈ ಸಂಗತಿಗಳ ಅರ್ಥವನ್ನು ವಿವರಿಸಬಲ್ಲವರು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖವನ್ನು ಬೆಳಗಿಸುತ್ತದೆ ಜ್ಞಾನವು ಕಠಿಣ ಮುಖಭಾವವನ್ನು ಸಹ ಬದಲಾಯಿಸುತ್ತದೆ.


ತನ್ನ ಮುಖದಲ್ಲಿರುವ ಮಹಿಮೆಯು ಕುಂದಿ ಹೋಗುತ್ತಿರುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು. ನಾವು ಮೋಶೆಯಂತೆ ಮಾಡುವವರಲ್ಲ.


ಮೋಶೆಯು ಇಸ್ರಾಯೇಲರ ಸಮೂಹವನ್ನು ಒಟ್ಟುಗೂಡಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವ ದೇವರು ನಿಮಗೆ ಹೀಗೆ ಆಜ್ಞಾಪಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು