ವಿಮೋಚನಕಾಂಡ 34:4 - ಕನ್ನಡ ಸಮಕಾಲಿಕ ಅನುವಾದ4 ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡನು. ಬೆಳಿಗ್ಗೆ ಎದ್ದು ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಕಲ್ಲಿನ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂತೆಯೇ ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದಕಾರಣ ಮೋಶೆ ಮೊದಲಿದ್ದ ಹಲಿಗೆಗಳಂತೆ ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಯೆಹೋವನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಮೋಶೆ ಮೊದಲಿನ ಎರಡು ಕಲ್ಲುಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡಿದನು. ಬಳಿಕ ಮರುದಿನ ಮುಂಜಾನೆ ಬೇಗನೆ ಸೀನಾಯಿ ಬೆಟ್ಟವನ್ನೇರಿದನು. ಯೆಹೋವನು ಆಜ್ಞಾಪಿಸಿದಂತೆ ಮೋಶೆಯು ಪ್ರತಿಯೊಂದನ್ನು ಮಾಡಿದನು. ಮೋಶೆಯು ಎರಡು ಕಲ್ಲಿನ ಹಲಿಗೆಗಳನ್ನು ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿ |