Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:7 - ಕನ್ನಡ ಸಮಕಾಲಿಕ ಅನುವಾದ

7 ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:7
57 ತಿಳಿವುಗಳ ಹೋಲಿಕೆ  

ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.


ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.


ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.


ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.


ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.


ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.


ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು.


ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.


ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.


ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.


ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ.


ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು