ವಿಮೋಚನಕಾಂಡ 35:22 - ಕನ್ನಡ ಸಮಕಾಲಿಕ ಅನುವಾದ22 ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು. ಅಧ್ಯಾಯವನ್ನು ನೋಡಿ |