ವಿಮೋಚನಕಾಂಡ 35:23 - ಕನ್ನಡ ಸಮಕಾಲಿಕ ಅನುವಾದ23 ನೀಲಿ, ಧೂಮ್ರ, ರಕ್ತವರ್ಣ ದಾರಗಳೂ ನಯವಾದ ನಾರುಮಡಿ, ಮೇಕೆಯ ಕೂದಲು, ಟಗರುಗಳ ಕೆಂಪು ಬಣ್ಣದ ಚರ್ಮಗಳೂ ಕಡಲುಹಂದಿಯ ಚರ್ಮಗಳೂ ಯಾರ ಬಳಿಯಲ್ಲಿದ್ದವೋ ಅವರೆಲ್ಲರೂ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯಾರಲ್ಲಿ ನೀಲಿ, ಧೂಮ, ಹಾಗು ರಕ್ತವರ್ಣಗಳುಳ್ಳ ದಾರಗಳು, ನಯವಾದ ನಾರುಬಟ್ಟೆ, ಆಡುಕೂದಲಿನ ಬಟ್ಟೆ, ಹದಮಾಡಿದ ಕೆಂಪುಬಣ್ಣದ ಕುರಿದೊಗಲು ಹಾಗು ಕಡಲುಹಂದಿಯ ತೊಗಲು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯಾರಲ್ಲಿ ನೀಲಿಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಯೂ ಆಡುಕೂದಲಿನ ಬಟ್ಟೆಯೂ ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳೂ ಕಡಲುಹಂದಿಯ ತೊಗಲುಗಳೂ ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲಿ ಕಡಲುಹಂದಿಯ ತೊಗಲಾಗಲಿ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದುಕೊಟ್ಟರು. ಅಧ್ಯಾಯವನ್ನು ನೋಡಿ |