Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:25 - ಕನ್ನಡ ಸಮಕಾಲಿಕ ಅನುವಾದ

25 ಕುಶಲತೆ ಬಲ್ಲ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ದಾರಗಳನ್ನು ಮತ್ತು ನಯವಾದ ನಾರುಮಡಿಯನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಪುಣೆಯರಾದ ಮಹಿಳೆಯರು ತಮ್ಮ ಕೈಗಳಿಂದ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ನೂಲನ್ನು ಹಾಗು ನಯವಾದ ನಾರಿನ ನೂಲನ್ನು ನೇಯ್ದು ಆ ನೂಲುಗಳನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಜಾಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲನ್ನೂ ನಾರಿನ ನೂಲನ್ನೂ ನೂತು ಆ ನೂಲನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿಪುಣರಾದ ಸ್ತ್ರೀಯರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:25
16 ತಿಳಿವುಗಳ ಹೋಲಿಕೆ  

ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಕರ್ತನ ಸೇವೆಯಲ್ಲಿ ದುಡಿಯುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು, ಕರ್ತನಲ್ಲಿ ತುಂಬಾ ಶ್ರಮಪಟ್ಟು ದುಡಿದಿರುವ ಪ್ರೀತಿಯ ಪೆರ್ಸೀಸಳಿಗೂ ನನ್ನ ವಂದನೆಗಳು.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆಗಳು.


ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು.


ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.


ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.


ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.


ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.


ಬೆಳ್ಳಿ, ಕಂಚುಗಳ ಕಾಣಿಕೆಗಳನ್ನು ಅರ್ಪಿಸುವುದಕ್ಕೆ ಮನಸ್ಸಿದ್ದವರೆಲ್ಲರೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸಕ್ಕೋಸ್ಕರ ಜಾಲಿ ಮರವಿದ್ದವರು ಅದನ್ನು ತಂದರು.


ಕುಶಲತೆ ಬಲ್ಲ ಎಲ್ಲಾ ಸ್ತ್ರೀಯರು ಮೇಕೆ ಕೂದಲುಗಳನ್ನು ನೇಯ್ದರು.


ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು