Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:3 - ಕನ್ನಡ ಸಮಕಾಲಿಕ ಅನುವಾದ

3 ಸಬ್ಬತ್ ದಿನದಲ್ಲಿ ನೀವು ವಾಸಮಾಡುವ ಯಾವ ಮನೆಯಲ್ಲಿಯೂ ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ವಾಸಿಸುವ ಯಾವ ಮನೆಯಲ್ಲೇ ಆಗಲಿ, ಸಬ್ಬತ್ ದಿನದಂದು ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು; ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ವಾಸಿಸುವ ಯಾವ ಸ್ಥಳದಲ್ಲಿಯೂ ಸಬ್ಬತ್‌ದಿನದಂದು ಬೆಂಕಿಯನ್ನು ಹೊತ್ತಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:3
9 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.


ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.


“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.


“ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.


ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಯೆಹೋವ ದೇವರಿಗೆ ಪರಿಶುದ್ಧವಾದ ಸಬ್ಬತ್ ದಿನ. ಆ ಸಬ್ಬತ್ ದಿನದಲ್ಲಿ ಕೆಲಸ ಮಾಡುವವರೆಲ್ಲಾ ಸಾಯಲೇಬೇಕು.


ಮೋಶೆಯು ಇಸ್ರಾಯೇಲರ ಇಡೀ ಸಮೂಹಕ್ಕೆ ಹೇಳಿದ್ದು: “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ.


“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು