Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:34 - ಕನ್ನಡ ಸಮಕಾಲಿಕ ಅನುವಾದ

34 ಇದಲ್ಲದೆ ಕಲಿಸುವುದಕ್ಕೆ ಅವನಿಗೆ ಮತ್ತು ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದೂ ಅಲ್ಲದೆ, ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೆ ಮತ್ತು ದಾನ್‍ಕುಲದ ಅಹೀಸಾಮಾಕನ ಮಗ ಒಹೋಲೀಯಾಬನಿಗೆ ವಿಶೇಷ ವರವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವದಕ್ಕೆ ಸಹ ಅವನಿಗೂ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನಿಗೂ ವರಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೊಲೀಯಾಬನಿಗೂ ಅನುಗ್ರಹಿಸಿದ್ದಾನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:34
10 ತಿಳಿವುಗಳ ಹೋಲಿಕೆ  

ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.


ಅವನು ದಾನನ ಪುತ್ರಿಯರಲ್ಲಿರುವ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ಟೈರಿನವನು. ಅವನು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಕಲ್ಲು, ಮರ, ಧೂಮ್ರವರ್ಣ, ನೀಲವರ್ಣ, ನಯವಾದ ನಾರಿನ ವಸ್ತ್ರ, ರಕ್ತವರ್ಣ ಇವುಗಳಲ್ಲಿ ಕೆಲಸವನ್ನು ಮಾಡುವುದಕ್ಕೂ ತರಬೇತಿಯನ್ನು ಹೊಂದಿದ್ದನು. ತನಗೆ ಒಪ್ಪಿಸಲಾಗುವ ಎಲ್ಲಾ ತರಹದ ಕೆತ್ತನೆಯ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನಿನ್ನ ತಂದೆಯೂ ನನ್ನ ಒಡೆಯನಾದ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.


ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.


ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.


ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸದ ಜ್ಞಾನದಿಂದಲೂ ಅವನನ್ನು ತುಂಬಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು