Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:35 - ಕನ್ನಡ ಸಮಕಾಲಿಕ ಅನುವಾದ

35 ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:35
23 ತಿಳಿವುಗಳ ಹೋಲಿಕೆ  

ಅವರು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ


ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು.


ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.


ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?


ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?


ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.


ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,


ಆತ್ಮಿಕ ವರಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಪವಿತ್ರಾತ್ಮರು ಒಬ್ಬರೇ.


ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.


“ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ದಿನಗಳು ನಿರೀಕ್ಷೆ ಇಲ್ಲದೆ ಮುಗಿಯುತ್ತವೆ.


ಅವನು ದಾನನ ಪುತ್ರಿಯರಲ್ಲಿರುವ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ಟೈರಿನವನು. ಅವನು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಕಲ್ಲು, ಮರ, ಧೂಮ್ರವರ್ಣ, ನೀಲವರ್ಣ, ನಯವಾದ ನಾರಿನ ವಸ್ತ್ರ, ರಕ್ತವರ್ಣ ಇವುಗಳಲ್ಲಿ ಕೆಲಸವನ್ನು ಮಾಡುವುದಕ್ಕೂ ತರಬೇತಿಯನ್ನು ಹೊಂದಿದ್ದನು. ತನಗೆ ಒಪ್ಪಿಸಲಾಗುವ ಎಲ್ಲಾ ತರಹದ ಕೆತ್ತನೆಯ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನಿನ್ನ ತಂದೆಯೂ ನನ್ನ ಒಡೆಯನಾದ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.


ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.


ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು