ವಿಮೋಚನಕಾಂಡ 36:38 - ಕನ್ನಡ ಸಮಕಾಲಿಕ ಅನುವಾದ38 ಕೊಂಡಿಯಿರುವ ಐದು ಕಂಬಗಳನ್ನು ಮಾಡಿ, ಅವುಗಳ ತಲೆಗಳನ್ನೂ ಕಂಬಗಳನ್ನೂ ಬಂಗಾರದಿಂದ ಹೊದಿಸಿದರು. ಆದರೆ ಅವುಗಳ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆ ಪರದೆ ತೂಗಿಸುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ, ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆ ಪರದೆ ತೂಗಿಸುವದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |