Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:5 - ಕನ್ನಡ ಸಮಕಾಲಿಕ ಅನುವಾದ

5 ಮೋಶೆಯ ಸಂಗಡ ಮಾತನಾಡಿ, “ಯೆಹೋವ ದೇವರು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ಕಾಣಿಕೆಗಳನ್ನು ಈ ಜನರು ತರುತ್ತಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಸರ್ವೇಶ್ವರ ಆಜ್ಞಾಪಿಸಿದ ಕೆಲಸಕ್ಕೆ ಬೇಕಾದುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾದದ್ದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿರುತ್ತಾರೆಂದು ಹೇಳಲಾಗಿ ಮೋಶೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಜನರು ಬಹಳ ಹೆಚ್ಚಾಗಿ ತಂದಿದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಮಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:5
8 ತಿಳಿವುಗಳ ಹೋಲಿಕೆ  

ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.


ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.


ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.


ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,


ಆಗ ಮೋಶೆಯು, “ಇನ್ನು ಮೇಲೆ ಪರಿಶುದ್ಧಸ್ಥಳದ ಕಾಣಿಕೆಗೋಸ್ಕರ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸಬೇಕು,” ಎಂದು ಆಜ್ಞಾಪಿಸಿದನು. ಹೀಗೆ ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು