ವಿಮೋಚನಕಾಂಡ 36:6 - ಕನ್ನಡ ಸಮಕಾಲಿಕ ಅನುವಾದ6 ಆಗ ಮೋಶೆಯು, “ಇನ್ನು ಮೇಲೆ ಪರಿಶುದ್ಧಸ್ಥಳದ ಕಾಣಿಕೆಗೋಸ್ಕರ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸಬೇಕು,” ಎಂದು ಆಜ್ಞಾಪಿಸಿದನು. ಹೀಗೆ ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಮೋಶೆ, “ದೇವಮಂದಿರದ ನಿರ್ಮಾಣಕ್ಕಾಗಿ ಯಾವ ಸ್ತ್ರೀಪುರುಷನು ಇನ್ನು ಮುಂದೆ ಏನನ್ನೂ ತರಬಾರದೆಂದು ಅಪ್ಪಣೆಮಾಡಿ, ಪಾಳೆಯದಲ್ಲಿ ಪ್ರಕಟಿಸಿ, ಜನರ ಕಾಣಿಕೆಗಳನ್ನು ನಿಲ್ಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವದನ್ನೂ ಸಿದ್ಧಪಡಿಸಬಾರದೆಂದು ಅಪ್ಪಣೆಮಾಡಿ ಪಾಳೆಯದಲ್ಲಿ ಪ್ರಕಟಿಸಿ ಜನರ ಕಾಣಿಕೆಗಳನ್ನು ನಿಲ್ಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು. ಅಧ್ಯಾಯವನ್ನು ನೋಡಿ |