Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:21 - ಕನ್ನಡ ಸಮಕಾಲಿಕ ಅನುವಾದ

21 ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿತ್ತು, ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕಂಬದ ಪ್ರತಿಯೊಂದು ಕಡೆಯಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿದ್ದವು. ಕೊಂಬೆಗಳು ಕವಲೊಡೆದಿರುವ ಮೂರು ಸ್ಥಳಗಳಲ್ಲೂ ಒಂದೊಂದು ಹೂವು ಇತ್ತು. ಆ ಹೂವಿಗೆ ಮೊಗ್ಗುಗಳು ಮತ್ತು ದಳಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:21
4 ತಿಳಿವುಗಳ ಹೋಲಿಕೆ  

ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿರಬೇಕು. ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳು ಇರಬೇಕು.


ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇರಬೇಕು.


ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇದ್ದವು.


ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿದ್ದವು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು