Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:6 - ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:6
11 ತಿಳಿವುಗಳ ಹೋಲಿಕೆ  

ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಆಗ ದಾವೀದನು ತನ್ನ ಮಗ ಸೊಲೊಮೋನನಿಗೆ, “ದ್ವಾರಾಂಗಳದ ಮಾದರಿಯನ್ನೂ, ಅದರ ಮನೆಗಳು, ಅದರ ಉಗ್ರಾಣಗಳು, ಅದರ ಮೇಲಿನ ಕೊಠಡಿಗಳು, ಅದರ ಅಂತರಂಗದ ಕೊಠಡಿಗಳು, ಕರುಣಾಸನದ ಸ್ಥಾನವು,


“ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು,


ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು.


ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು