Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:9 - ಕನ್ನಡ ಸಮಕಾಲಿಕ ಅನುವಾದ

9 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:9
15 ತಿಳಿವುಗಳ ಹೋಲಿಕೆ  

ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.


ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿರಬೇಕು.


ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.


ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.


ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿದನು.


ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಿದನು.


ಆ ಕೆರೂಬಿಗಳನ್ನು ದೇವಾಲಯದ ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವುದರಿಂದ ಒಂದು ರೆಕ್ಕೆಯ ಈ ಭಾಗದ ಗೋಡೆಯನ್ನೂ, ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು. ಆಲಯದ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು