Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:24 - ಕನ್ನಡ ಸಮಕಾಲಿಕ ಅನುವಾದ

24 ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇವಮಂದಿರದ ವಿವಿಧ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರದ ತೂಕ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಸುಮಾರು ಒಂದು ಸಾವಿರ ಕಿಲೋಗ್ರಾಂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವ ಮಂದಿರದ ಸಕಲವಿಧವಾದ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಭತ್ತು ತಲಾಂತು ಏಳು ನೂರಮೂವತ್ತು ಶೆಕೆಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:24
13 ತಿಳಿವುಗಳ ಹೋಲಿಕೆ  

ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು.


ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.


ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.


‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.


ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ಪರಿಶುದ್ಧಸ್ಥಳದ ಅಳತೆಯ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಸುಮಾರು ನಾಲ್ಕು ಲೀಟರಷ್ಟು ಓಲಿವ್ ಎಣ್ಣೆಯನ್ನು ಸಹ ತೆಗೆದುಕೊಂಡು,


ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.


“ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು