Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:27 - ಕನ್ನಡ ಸಮಕಾಲಿಕ ಅನುವಾದ

27 ಪರಿಶುದ್ಧಾಲಯದ ಗದ್ದಿಗೇ ಕಲ್ಲುಗಳಿಗೆ ಮತ್ತು ಪರದೆಗಳ ಗದ್ದಿಗೇ ಕಲ್ಲುಗಳಿಗೆ ಎರಕ ಹೊಯ್ಯಲು 3,400 ಕಿಲೋಗ್ರಾಂ ಬೆಳ್ಳಿ ಹಿಡಿಯಿತು. ಒಂದು ಗದ್ದಿಗೇ ಕಲ್ಲಿಗೆ ಮೂವತ್ನಾಲ್ಕು ಕಿಲೋಗ್ರಾಂನಂತೆ ನೂರು ಗದ್ದಿಗೇ ಕಲ್ಲುಗಳಿಗೆ 3,400 ಕಿಲೋಗ್ರಾಂ ಬೆಳ್ಳಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ಬೆಳ್ಳಿಯಲ್ಲಿ 3,400 ಕಿಲೋಗ್ರಾಂನ್ನು ದೇವಮಂದಿರದ ನೂರು ಗದ್ದಿಗೇಕಲ್ಲುಗಳನ್ನು ಹಾಗು ತೆರೆಯ ಕಂಬಗಳ ಗದ್ದಿಗೇಕಲ್ಲುಗಳನ್ನು ಎರಕ ಹೊಯ್ಯಲು ಉಪಯೋಗಿಸಲಾಗಿತ್ತು. ಒಂದೊಂದು ಗದ್ದಿಗೆಗೆ 34 ಕಿಲೋಗ್ರಾಂನ್ನು ಉಪಯೋಗಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವಮಂದಿರದ ಗದ್ದಿಗೇ ಕಲ್ಲುಗಳನ್ನೂ ತೆರೆಯ ಕಂಬಗಳ ಗದ್ದಿಗೇಕಲ್ಲುಗಳನ್ನೂ ಎರಕಹೊಯ್ಯುವದರಲ್ಲಿ ಒಂದೊಂದು ಗದ್ದಿಗೇಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:27
6 ತಿಳಿವುಗಳ ಹೋಲಿಕೆ  

ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಬೇಕು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.


ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.


ಹೀಗೆ ಅವು ಎಂಟು ಚೌಕಟ್ಟುಗಳೂ ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳೂ ಇರುವುದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳೂ ಇರಬೇಕು.


ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನೂ,


ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.


ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು