Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:3 - ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೀಠದ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಗೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:3
6 ತಿಳಿವುಗಳ ಹೋಲಿಕೆ  

ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು,


ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.


ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.


ಬಲಿಪೀಠಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿದರು. ಅದು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಿದರು.


ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;


ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು