ವಿಮೋಚನಕಾಂಡ 38:7 - ಕನ್ನಡ ಸಮಕಾಲಿಕ ಅನುವಾದ7 ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಮಾಡಿದ ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದರು. ಅವರು ಆ ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದರ ಎರಡು ಪಕ್ಕಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು. ಆ ಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರ ಎರಡು ಪಕ್ಕಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು. ಆ ವೇದಿಯನ್ನು ಹಲಿಗೆಗಳಿಂದ ಪೆಟ್ಟಿಗೆಯಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು. ಅಧ್ಯಾಯವನ್ನು ನೋಡಿ |