Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:26 - ಕನ್ನಡ ಸಮಕಾಲಿಕ ಅನುವಾದ

26 ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಸೇವೆಗೋಸ್ಕರ ಮಾಡಿದ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗೆ ನಿಲುವಂಗಿಯ ಕೆಳಅಂಚಿನ ಸುತ್ತಲೆಲ್ಲ ದಾಳಿಂಬೆ ಹಣ್ಣುಗಳೂ ಗೆಜ್ಜೆಗಳೂ ಇದ್ದವು. ಪ್ರತಿ ದಾಳಿಂಬೆ ಹಣ್ಣಿನ ನಡುವೆ ಒಂದೊಂದು ಗೆಜ್ಜೆ ಇತ್ತು. ಯಾಜಕರು ಯೆಹೋವನ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ನಿಲುವಂಗಿ ಇದಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:26
9 ತಿಳಿವುಗಳ ಹೋಲಿಕೆ  

ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.


ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,


ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.


ನಿನ್ನ ತೋಟದಲ್ಲಿ ದಾಳಿಂಬೆ ವನವೂ ಫಲಕೊಡುವ ಉತ್ತಮ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಇವೆ.


ನಿನ್ನ ತುಟಿ ಕೆಂಪು ದಾರದ ಹಾಗೆ ಇವೆ. ನಿನ್ನ ಮಾತು ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.


ನೀನು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.


ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ದಾಳಿಂಬೆ ಹಣ್ಣಿನಂತೆ ಅದರ ಅಂಚಿನ ಸುತ್ತಲೂ ಮಾಡಿ, ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನೂ ಸುತ್ತಲೂ ಇರಿಸಬೇಕು.


ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ, ಆ ಗಂಟೆಗಳನ್ನು ದಾಳಿಂಬೆಗಳ ನಡುವೆಯೇ ಇರಿಸಿದರು.


ಆರೋನನಿಗೆ ಹಾಗೂ ಅವನ ಮಕ್ಕಳಿಗೆ ನಯವಾದ ನಾರಿನಿಂದ ಹೊಸೆದ ಕೆಲಸದಿಂದ ಮಾಡಿದ ಮೇಲಂಗಿಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು