Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:37 - ಕನ್ನಡ ಸಮಕಾಲಿಕ ಅನುವಾದ

37 ಶುದ್ಧವಾದ ದೀಪಸ್ತಂಭವನ್ನು, ಅದರ ದೀಪಗಳನ್ನು, ಕ್ರಮವಾಗಿಡುವ ದೀಪಗಳನ್ನು, ಅದರ ಉಪಕರಣಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಚೊಕ್ಕ ಬಂಗಾರದ ದೀಪವೃಕ್ಷ, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆ ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಚೊಕ್ಕಬಂಗಾರದ ದೀಪಸ್ತಂಭವು, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆಯು ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಅಪ್ಪಟ ಬಂಗಾರದ ದೀಪಸ್ತಂಭವನ್ನೂ ಅದರಲ್ಲಿರುವ ಹಣತೆಗಳನ್ನೂ ಎಣ್ಣೆಯನ್ನೂ ಹಣತೆಗಳೊಂದಿಗೆ ಉಪಯೋಗಿಸುವ ಇತರ ವಸ್ತುಗಳನ್ನೂ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:37
9 ತಿಳಿವುಗಳ ಹೋಲಿಕೆ  

ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


“ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು.


ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,


ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,


“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.


“ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”


ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು