Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:39 - ಕನ್ನಡ ಸಮಕಾಲಿಕ ಅನುವಾದ

39 ಬಲಿಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತಾಮ್ರದ ಬಲಿಪೀಠ, ಅದರ ತಾಮ್ರದ ಜಾಳಿಗೆ, ಅದರ ನೀರಿನ ತೊಟ್ಟಿ, ಅದರ ಪೀಠ ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಡೇರೆಯ ಬಾಗಲಿನ ಪರದೆಯನ್ನೂ; ತಾಮ್ರದ ಯಜ್ಞವೇದಿಯು, ಅದರ ತಾಮ್ರದ ಜಾಳಿಗೆಯು, ಅದರ ಕೋಲುಗಳು, ಉಪಕರಣಗಳು ಇವುಗಳನ್ನೂ; ಗಂಗಾಳವು, ಅದರ ಪೀಠವು ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು ಅವನಿಗೆ ತಾಮ್ರದ ವೇದಿಕೆಯನ್ನೂ ತಾಮ್ರದ ಜಾಳಿಗೆಯನ್ನೂ ವೇದಿಕೆಯನ್ನು ಹೊರುವುದಕ್ಕೆ ಉಪಯೋಗಿಸುವ ಕೋಲುಗಳನ್ನೂ ವೇದಿಕೆಯ ಎಲ್ಲಾ ಉಪರಕಣಗಳನ್ನೂ ಗಂಗಾಳವನ್ನೂ ಮತ್ತು ಅದರ ಕೆಳಗಿರುವ ಗದ್ದಿಗೇಕಲ್ಲನ್ನೂ ಮೋಶೆಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:39
7 ತಿಳಿವುಗಳ ಹೋಲಿಕೆ  

ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.


ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.


ಅದಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿ, ಆ ಜಾಳಿಗೆಯ ನಾಲ್ಕು ಮೂಲೆಗಳಿಗೆ ಕಂಚಿನ ನಾಲ್ಕು ಬಳೆಗಳನ್ನು ಮಾಡಬೇಕು.


“ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು.


ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,


ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು, ಅದರ ಹಗ್ಗಗಳನ್ನು, ಗುಡಾರದ ಗೂಟಗಳನ್ನು, ಸಭೆಯ ದೇವದರ್ಶನದ ಗುಡಾರಕ್ಕೆ ಬೇಕಾದ ಎಲ್ಲಾ ವಸ್ತುಗಳನ್ನು,


“ಇದಲ್ಲದೆ ಜಾಲಿ ಮರದಿಂದ ಬಲಿಪೀಠವನ್ನು ಮಾಡಬೇಕು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು