Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:5 - ಕನ್ನಡ ಸಮಕಾಲಿಕ ಅನುವಾದ

5 ಅದರ ಮೇಲಿರುವ ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಲಾಗಿತ್ತು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಉಂಟಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋದನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠ ನಾರುಬಟ್ಟೆಯನ್ನು ಮತ್ತು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:5
10 ತಿಳಿವುಗಳ ಹೋಲಿಕೆ  

ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,


ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ.


ಆರೋನನಿಗೆ ನಿಲುವಂಗಿಯನ್ನು ಹೊದಿಸಿ, ನಡುಕಟ್ಟಿನಿಂದ ಅವನ ನಡುವನ್ನು ಕಟ್ಟಿ, ಅವನಿಗೆ ಮೇಲಂಗಿಯನ್ನು ತೊಡಿಸಿ, ಅವನ ಮೇಲೆ ಏಫೋದನ್ನು ಹಾಕಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ, ಅದರಿಂದ ಅವನನ್ನು ಬಿಗಿದನು.


ತರುವಾಯ ಆ ವಸ್ತ್ರಗಳನ್ನು ತೆಗೆದುಕೊಂಡು ಆರೋನನಿಗೆ ಅಂಗಿಯನ್ನೂ ಏಫೋದಿನ ನಿಲುವಂಗಿಯನ್ನೂ ಏಫೋದನ್ನೂ ಎದೆಪದಕವನ್ನೂ ತೊಡಿಸಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ,


ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದ್ದಾಗಿರಬೇಕು.


ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು,


ಆ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳನ್ನು ತಯಾರಿಸಿದ್ದರು.


ಮುದ್ರೆ ಕೆತ್ತುವ ಪ್ರಕಾರ, ಗೋಮೇಧಿಕ ರತ್ನಗಳಲ್ಲಿ ಹನ್ನೆರಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿ ಬಂಗಾರದ ಕುಂದಣದಲ್ಲಿ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು