Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:8 - ಕನ್ನಡ ಸಮಕಾಲಿಕ ಅನುವಾದ

8 ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ಏಫೋದ್’ ಕವಚದಂತೆಯೇ, ಚಿನ್ನದ ದಾರದಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಕಸೂತಿ ಕೆಲಸದಿಂದ ಕೂಡಿದ ಒಂದು ಚೀಲದಂಥ ವಕ್ಷಪದಕವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕವಚದಂತೆಯೇ ಬುಟೇದಾರಿಯ ಕೆಲಸದಿಂದ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಚೀಲದ ಪದಕವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬುಟೇದಾರಿ ಕೆಲಸವಾಗಿತ್ತು. ಅದನ್ನು ಚಿನ್ನದ ದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:8
9 ತಿಳಿವುಗಳ ಹೋಲಿಕೆ  

ಅವರು ಮಾಡಬೇಕಾದ ವಸ್ತ್ರಗಳು ಇವು: ಎದೆಪದಕವು, ಏಫೋದ್, ನಿಲುವಂಗಿ, ಕಸೂತಿಯ ಕೆಲಸದ ಮೇಲಂಗಿ, ಮುಂಡಾಸ, ನಡುಕಟ್ಟು. ನಿನ್ನ ಸಹೋದರನಾದ ಆರೋನನೂ ಅವನ ಪುತ್ರರೂ ನನ್ನ ಯಾಜಕರಾಗಿ ಸೇವೆ ಮಾಡುವುದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಿಸು.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು.


ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೆ.


“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.


ಅದು ಚಚ್ಚೌಕವಾಗಿತ್ತು, ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು