1 ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು.
1 ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.
“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.
ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.
ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.
“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.
ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.
ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು.