Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:10 - ಕನ್ನಡ ಸಮಕಾಲಿಕ ಅನುವಾದ

10 ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮೊದಲಿನಿಂದಲೂ ನೀನು ದಾಸನ ಸಂಗಡ ಮಾತಾಡಿದ ಮೇಲೆಯೂ ವಾಕ್ಚಾತುರ್ಯವಿಲ್ಲದವನು; ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಎಂದು ಹೇಳಲು ಯೆಹೋವನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:10
11 ತಿಳಿವುಗಳ ಹೋಲಿಕೆ  

ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.


ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.


ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.


ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.


ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.


“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


“ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವುದು.


ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.


ಅದಕ್ಕೆ ಮೋಶೆಯು ಯೆಹೋವ ದೇವರ ಮುಂದೆ, “ಇಗೋ, ನಾನು ತೊದಲು ಮಾತನಾಡುವವನು. ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.


ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು