ವಿಮೋಚನಕಾಂಡ 4:18 - ಕನ್ನಡ ಸಮಕಾಲಿಕ ಅನುವಾದ18 ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |