ವಿಮೋಚನಕಾಂಡ 4:21 - ಕನ್ನಡ ಸಮಕಾಲಿಕ ಅನುವಾದ21 ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿ |