Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:22 - ಕನ್ನಡ ಸಮಕಾಲಿಕ ಅನುವಾದ

22 ಆಗ ನೀನು ಫರೋಹನಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲ ನನ್ನ ಮಗನು, ನನ್ನ ಜೇಷ್ಠಪುತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದಕಾರಣ ನೀನು ಫರೋಹನಿಗೆ - ಇಸ್ರಾಯೇಲ್ ಜನವು ನನಗೆ ಚೊಚ್ಚಲಮಗನಂತೆ ಇದೆ ಎಂದು ತಿಳುಕೋ; ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವದಕ್ಕೆ ಅವನಿಗೆ ಅಪ್ಪಣೆ ಕೊಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ನೀನು ಫರೋಹನಿಗೆ, ‘ಇಸ್ರೇಲ್ ಜನಾಂಗವು ಯೆಹೋವನಿಗೆ ಚೊಚ್ಚಲು ಮಗನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:22
17 ತಿಳಿವುಗಳ ಹೋಲಿಕೆ  

“ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.


ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.


“ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು.


ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.


ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು?


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು