ವಿಮೋಚನಕಾಂಡ 4:23 - ಕನ್ನಡ ಸಮಕಾಲಿಕ ಅನುವಾದ23 ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು. ಅಧ್ಯಾಯವನ್ನು ನೋಡಿ |
“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.