Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:25 - ಕನ್ನಡ ಸಮಕಾಲಿಕ ಅನುವಾದ

25 ಚಿಪ್ಪೋರಳು ಕಲ್ಲಿನ ಚೂರಿ ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ, ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿ ಅವನಿಗೆ, “ಖಂಡಿತವಾಗಿ ನೀನು ನನಗೆ ರಕ್ತಧಾರೆಯಿಂದಾದ ಗಂಡನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಮೋಶೆಗೆ, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ, ಮೋಶೆಗೆ - ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನಾದಿ ಎಂದು ಹೇಳಿ ಕತ್ತರಿಸಿದ್ದನ್ನು ಅವನ ಪಾದಗಳಿಗೆ ಮುಟ್ಟಿಸಲು ಯೆಹೋವನು ಅವನನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:25
6 ತಿಳಿವುಗಳ ಹೋಲಿಕೆ  

ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.


ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು.


ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.


ಆಗ ಯೆಹೋವ ದೇವರು ಅವನನ್ನು ಉಳಿಸಿದರು. ಆಗ ಅವಳು, “ಸುನ್ನತಿಯ ನಿಮಿತ್ತ ನೀನು ನನಗೆ ರಕ್ತಧಾರೆಯಿಂದ ಗಂಡನಾಗಿದ್ದೀ,” ಎಂದಳು.


ಅವನು ತನ್ನ ಬಳಿಗೆ ಕಳುಹಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಪುತ್ರರನ್ನು ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು