Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:31 - ಕನ್ನಡ ಸಮಕಾಲಿಕ ಅನುವಾದ

31 ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:31
27 ತಿಳಿವುಗಳ ಹೋಲಿಕೆ  

“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ನೀವು ಅವರಿಗೆ, ‘ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಈಜಿಪ್ಟಿನವರನ್ನು ಸಂಹರಿಸಿ, ನಮ್ಮ ಮನೆಗಳನ್ನು ಕಾಪಾಡುವುದಕ್ಕಾಗಿ ಇಸ್ರಾಯೇಲರ ಮನೆಗಳನ್ನು ದಾಟಿಹೋದ ಯೆಹೋವ ದೇವರ ಪಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ,’ ಎಂದು ನೀವು ಹೇಳಬೇಕು,” ಎಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.


“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.


ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ಆಗ ಆ ಮನುಷ್ಯನು ತಲೆಬಾಗಿ ಯೆಹೋವ ದೇವರಿಗೆ ಅಡ್ಡಬಿದ್ದು ಆರಾಧಿಸಿದನು.


ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು.


ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.


ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಜನರೆಲ್ಲಾ ಒಂದಾಗಿ ಉತ್ತರಕೊಟ್ಟು, “ಯೆಹೋವ ದೇವರು ಹೇಳಿದ್ದನ್ನೆಲ್ಲಾ ಮಾಡುತ್ತೇವೆ,” ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ಹೇಳಿದನು.


ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.


ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬಾಗಿ ಅವರನ್ನು ಆರಾಧಿಸಿದನು.


ಯೆಹೋವ ದೇವರು ತಮ್ಮ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದರೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.


ಆಗ ಎಜ್ರನು ಮಹಾ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಉತ್ತರವಾಗಿ, “ಆಮೆನ್, ಆಮೆನ್,” ಎಂದು ಹೇಳಿ ನೆಲದವರೆಗೂ ತಮ್ಮ ತಲೆಗಳನ್ನು ಬಗ್ಗಿಸಿ ಯೆಹೋವ ದೇವರನ್ನು ಆರಾಧಿಸಿದರು.


ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.


ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.


ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು